Compartir
Rushyashrunga (Kannada) (en Canarés)
Harisha Hagalawadi (Autor)
·
Chanda Pustaka
· Tapa Blanda
Rushyashrunga (Kannada) (en Canarés) - Harisha Hagalawadi
Libro Nuevo
Importado
Envío: 11 a 15 días háb.
$ 46.310$ 23.160
Costos de importación incluídos en el precio ✅
Reseña del libro "Rushyashrunga (Kannada) (en Canarés)"
ಡಿಯರ್ ಋಷ್ಯಶೃಂಗ... ಕೆಲವು ಕಲ್ಪಗಳ ಹಿಂದೆ ನಿನ್ನ ಬಗ್ಗೆ ಓದಿದ ನೆನಪು. ನಿನ್ನ ತಲೆಯಲ್ಲಿ ಕೊಂಬಿತ್ತೆಂದು ಒಂದು ಕತೆ. ಜಿಂಕೆಗೆ ಹುಟ್ಟಿದ್ದಕ್ಕೆ ಹೀಗೆಂದು ವ್ಯಾಖ್ಯೆ. ಬರಕ್ಕೀಡಾಗಿ ಕಂಗೆಟ್ಟ ನಾಡಿಗೆ ಮಳೆ ತಂದೆಯೆಂದು ಉಪಾಖ್ಯಾನ. ಜಗದ್ಸೃಷ್ಟಿಯಲ್ಲಿ ಹೆಣ್ಣೆಂಬ ವಿಲಿಂಗಿಯುಂಟೆಂದೇ ನೀನು ಕಂಡಿದ್ದಿಲ್ಲವೆಂದು ಇನ್ನೂ ಒಂದು ಕತೆ. ದಶರಥನ ಪುತ್ರಕಾಮೇಷ್ಠಿಯ ಅಧ್ವರ್ಯು ನೀನಾಗಿದ್ದೆಯೆಂದು ಇನ್ನೆಲ್ಲೋ ಉಲ್ಲೇಖ. ಶೃಂಗೇರಿ-ಕಿಗ್ಗಗಳ ಸ್ಥಳಪುರಾಣದಲ್ಲಿ ನಿನ್ನ ಪ್ರಸ್ತಾಪ... ಹೀಗೆ, ಹತ್ತಾರು ಕಾಲದೇಶಗಳ ಪುರಾಣದಲ್ಲಿ ಅಷ್ಟಿಷ್ಟು ಓದರಿತಿದ್ದ ನಿನ್ನನ್ನು ಹೀಗಿನ್ನೊಂದಾಗಿ ಕಂಡೇನೆಂದುಕೊಂಡಿರಲಿಲ್ಲ. ನಿಜಕ್ಕೂ ಬೆರಗಾಯಿತು. ಮರುಳ ನೀನು. ಹುಚ್ಚಾಪಟ್ಟೆ. ಎಣಿಕೆಗೆ ಸಿಗದವನು. ನಿಲುಕಿಗೆಟುಕದವನು. ಇಕೋ ಇಕೋ- ಇನ್ನೇನು ಹಿಡಿದೇಬಿಟ್ಟೇನೆಂದುಕೊಂಡರೆ ಮೀನಿನಂತೆ... ಅಲ್ಲಲ್ಲ ಸೊಳ್ಳೆಯಂತೆ ನುಣುಚಿಕೊಂಡವನು. ಏನೆಂದು ತಿಳಿಯದ, ತಿಳಿಸಿಯೂ ತಿಳಿಯಗೊಡದ- ತಿಳಿಯಾಗದ ಕೊಳದಂತಿರುವ, ಈ ನಿನ್ನ ಕತೆಯೇನು ಮಾರಾಯ? ಮರುಳಿಗೂ ಮೆಥಡುಂಟೆಂದು ಅಂದಕೊಂಡವನು ನಾನು. ಹಾಗಂದುಕೊಂಡ ಮೂಢನೇ ನಾನಿರಬಹುದು. ನಿನ್ನ ಈ ಹೊಸಕತೆಯನ್ನು ಓದಿದಾಗ ನಿನಗೊಂದು ನಿಗದಿಯ ಮೆಥಡೇ ಇಲ್ಲವೆಂದು ಅನಿಸಿಬಿಟ್ಟಿತಲ್ಲ, ಗುರೂ, ಇದಕ್ಕೇನನ್ನಲಿ? ಕಂಗೆಟ್ಟೆ. ಕೆಲವೊಮ್ಮೆ ಕಂಗಾಲಾದೆ. ಇಷ್ಟಿದ್ದೂ, ನಾನೆಣಿಸಿದ ನಿಗದಿ ನಿಖರತೆಯೆಲ್ಲ ನಿನ್ನಂಥವರಿಗಲ್ಲವೆಂಬುದು,
- 0% (0)
- 0% (0)
- 0% (0)
- 0% (0)
- 0% (0)
Todos los libros de nuestro catálogo son Originales.
El libro está escrito en Canarés.
La encuadernación de esta edición es Tapa Blanda.
✓ Producto agregado correctamente al carro, Ir a Pagar.